ದೋಸ್ತಿ ಸರ್ಕಾರದ ಎಫೆಕ್ಟ್‌ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಮ್ಯಾಗಿಲ್ಲ ಸ್ಥಾನ ?

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧತೆ ನಡೆಸಿವೆ.

ಅಲ್ಲದೆ ಮಂಡ್ಯದಲ್ಲಿ ಜೆಡಿಎಸ್‌ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಇದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಬೇಕಾಗಿದ್ದ ರಮ್ಯಾ ಈಗ ಮೇಲ್ಮನೆಯತ್ತ ಗಮನ ಹರಿಸಿದ್ದಾರೆ.

ಲೋಕಸಭೆಯಿಂದ ದೂರಸರಿದು ರಾಜ್ಯ ಸಭೆಗೆ ಸ್ಪರ್ದಿಸುವ ಸಾಧ್ಯತೆ ಹೆಚ್ಚಿರುವುದಾಗಿ ಹೇಳಲಾಗುತ್ತಿದೆ. ಇನ್ನು ಈ ವಿಚಾರಕ್ಕೆ ಇಂಬು ನೀಡುವಂತೆ ಇಂದು ಸಚಿವ ಪುಟ್ಟರಾಜು ಮಂಡ್ಯ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಲೋಕಸಭೆಯ ಉಪ ಚುನಾವಣೆ ನಡೆಯುವ ಅನುಮಾನ ಕೂಡ ವ್ಯಕ್ತವಾಗಿದೆ. ಹಾಗಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ ಬೆಂಬಲದೊಂದಿಗೆ ಜೆಡಿಎಸ್ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎನ್ನಲಾಗುತ್ತಿದೆ.

ಮತ್ತೊಂದೆಡೆ ಜಿಲ್ಲಾ ಕಾಂಗ್ರೆಸ್ ನಾಯಕತ್ವದ ಮೇಲೆ ಕಣ್ಣು ಹಾಕಿದ್ದ ಮಾಜಿ ಸಚಿವ ಚೆಲುವನಾರಾಯಸ್ವಾಮಿ ಮತ್ತಷ್ಟು ಹಿನ್ನಡೆ ಅನುಭವಿಸೋ ಸಾಧ್ಯತೆ ಹೆಚ್ಚಾಗಿದೆ‌. ಒಂದು ವೇಳೆ ಕಾಂಗ್ರೆಸ್ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದೇ ಆದರೆ ಕಾಂಗ್ರೆಸ್ ಮಂಡ್ಯ ಜಿಲ್ಲೆಯಲ್ಲಿ ತನ್ನ ಶಕ್ತಿಯನ್ನು ಮತ್ತಷ್ಟು ಕಳೆದುಕೊಳ್ಳೋ ಸಾಧ್ಯತೆ ಇದೆ. ಇದು ಕಾಂಗ್ರೆಸ್ ಕಾರ್ಯಕರ್ತರ ವಿರೋಧಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published.

Social Media Auto Publish Powered By : XYZScripts.com