ಮುಂಬೈ ನಗರದಲ್ಲಿ ಮುಂಗಾರಿನ ಆರ್ಭಟ : ಮಹಾಮಳೆಗೆ ಜನಜೀವನ ಅಸ್ತವ್ಯಸ್ತ

ಮುಂಬೈ : ಮುಂಬೈನಲ್ಲಿ ಮುಂಗಾರಿನ ಆರ್ಭಟ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ವಾಣಿಜ್ಯ ನಗರಿಯಲ್ಲಿ 231.4 ಮಿ.ಮೀ. ಮಳೆಯಾಗಿದ್ದು, ಕಡಲು ಮಳೆಯ ಆರ್ಭಟಕ್ಕೆ ಉಕ್ಕುತ್ತಲೇ ಇದೆ.

ಈ ವರ್ಷ ಮುಂಬೈಯಲ್ಲಿ ಸುರಿದ ಅತೀ ಹೆಚ್ಚು ಮಳೆ ಇದಾಗಿದೆ. ಇಂದು ಸಹ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೊದಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತಾದರೂ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ.

ಹಲವೆಡೆ ರಸ್ತೆಯಲ್ಲಿ ನೀರು ತುಂಬಿದ್ದು ಟ್ರಾಫಿಕ್ ಜಾಮ್ ಗೆ ಜನ ಹೈರಾಣಾಗಿದ್ದಾರೆ. ರೈಲು ಸಂಚಾರವೂ ಅಸ್ತವ್ಯಸ್ತವಾಗಿದೆ. ಪಾರ್ಕ್ ಮಾಡಲಾಗಿದ್ದ ಕೆಲವು ವಾಹನಗಳ ಮೇಲೆ ಮರಗಳು ಬಿದ್ದ ಪರಿಣಾಮ ವಾಹನಗಳು ಜಖಂ ಆಗಿವೆ.

Image result for mumbai rain

ವಿದ್ಯುತ್‌ ಕಂಬಗಳು, ಮರಗಳು ಧರೆಗುರುಳಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೆ  ಶಾಲಾ ಕಾಲೇಜಗಳಿಗೆ ರಜೆ ಘೋಷಿಸಲಾಗಿದ್ದು, ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com