ಹಾಸನದ ಡಿಸಿಯಾಗಿ ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ : ಹೈಕೋರ್ಟ್ ಆದೇಶ

ಬೆಂಗಳೂರು :  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಿಂಧೂರಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿ ಇರ್ತ್ಯರ್ಥವಾಗಿದ್ದು ಹಾಸನ ಜಿಲ್ಲೆಗೆ ಮತ್ತೆ ಡಿಸಿಯಾಗಿ ರೋಹಿನಿ ಸಿಂಧೂರಿ ವರ್ಗಾವಣೆಯಾಗಿದ್ದಾರೆ.

ರೋಹಿಣಿ ಅವರನ್ನು ರಾಜ್ಯ ಸರ್ಕಾರ 2018ರ ಮಾರ್ಚ್‌ 7ರಂದು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರು ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ಮತ್ತು ಹೈಕೋರ್ಟ್‌ನಲ್ಲಿ  ಹೋರಾಟ ನಡೆಸಿದ್ದರು. ರೋಹಿಣಿ ಸಿಂಧೂರಿಯವರು ಕಳುಹಿಸಿರುವ ಅರ್ಜಿಯಯನ್ನು ಇಂದು ನ್ಯಾಯಾಲಯ ಇತ್ಯರ್ಥಗೊಳಿಸಿದ್ದಾರೆ.

Image result for rohini sindhuri

‘ನನ್ನನ್ನು ಅವಧಿಪೂರ್ವ ವರ್ಗ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರ’ ಎಂದು ಆಕ್ಷೇಪಿಸಿ ಐ.ಎ.ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ  ರೋಹಿಣಿ ಅವರ ಅರ್ಜಿಯನ್ನು ಪುರಸ್ಕರಿಸಿದ್ದು, ಮತ್ತೆ ಹಾಸನಕ್ಕೆ ಡಿಸಿಯಾಗಿ ಮುಂದುವರಿಯುವಂತೆ ಸೂಚಿಸಿದೆ.

ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪೊನ್ನಣ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು.

Leave a Reply

Your email address will not be published.

Social Media Auto Publish Powered By : XYZScripts.com