ದೋಸ್ತಿ ಸರ್ಕಾರದ ಅಸ್ತಿತ್ವದ ಬಗ್ಗೆ ಯಾರೂ ನಿರೀಕ್ಷಿಸಿರದ ಹೇಳಿಕೆ ನೀಡಿದ್ರು ಸಿದ್ದರಾಮಯ್ಯ !!

ಬೆಂಗಳೂರು : ಬಜೆಟ್ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ಮುನಿಸು ಬಹಿರಂಗವಾದ ಬೆನ್ನಲ್ಲೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಲೋಕಸಭಾ ಚುನಾವಣೆಗೆ ಮಾತ್ರ ಮುಂದುವರಿಯಲಿದೆ ಎಂಬ ಸಿದ್ದರಾಮಯ್ಯ ಹೇಳಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಸಿದ್ದರಾಮಯ್ಯನವರು ಆಪ್ತರ ಜೊತೆ ಮಾತುಕತೆ ನಡೆಸುತ್ತಿರುವ ವೇಳೆ ಹೇಳಿರುವ ಮಾತು ಇದೀಗ ಎಲ್ಲೆಡೆ ವೈರಲ್ ಆಗಿದೆ.

ಒಂದು ವರ್ಷದವರೆಗೆ ನನ್ನ ಯಾರೂ ಮುಟ್ಟುವ ಹಾಗಿಲ್ಲ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಸಿದ್ದರಾಮಯ್ಯನವರು ಲೋಕಸಭೆ ಚುನಾವಣೆ ಬಳಿಕ ಏನಾಗುತ್ತೋ ನೋಡೋಣ ಎಂದು ಹೇಳಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಹೊಸ ಸರ್ಕಾರದ ಆಯುಷ್ಯ ಕುರಿತು ಆಪ್ತರ ಜತೆ ಮಾತನಾಡುವ ವೇಳೆ ಸಿದ್ದರಾಮಯ್ಯ, ಐದು ವರ್ಷಗಳ ಕಾಲ ಸರ್ಕಾರ ಉಳಿಯೋದು ಕಷ್ಟ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆವರೆಗೂ ಮೈತ್ರಿ ಸರ್ಕಾರದ ಅಧಿಕಾರಕ್ಕೆ ತೊಂದರೆ ಇಲ್ಲ. ಲೋಕಸಭಾ ಚುನಾವಣೆ ನಂತರ ಬೆಳವಣಿಗೆಗಳು ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ  ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ತಿಳಿಸಿರುವುದು ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ.

 

Leave a Reply

Your email address will not be published.

Social Media Auto Publish Powered By : XYZScripts.com