ಸಿದ್ದರಾಮಯ್ಯ, ಕುಮಾರಸ್ವಾಮಿ ಬಡಿದಾಡ್ಕೊಂಡು ಸಾಯ್ತಿದ್ದಾರೆ, ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : BSY

ಬೆಂಗಳೂರು :  ಒಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ, ಮತ್ತೊಂದು ಕಡೆ ಸಿಎಂ ಕುಮಾರಸ್ವಾಮಿ ಅವರೇ ಬಡಿದಾಡಿಕೊಂಡು ಸಾಯ್ತಿದ್ದಾರೆ. ನಮಗೂ ಇದಕ್ಕೂ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಬಸವರಾಜ್ ಬೊಮ್ಮಾಯಿ ಅಮಿತ್ ಶಾ ಅವರನ್ನು ಭೇಟಿಯಾಗಲು ಹೋಗಿದ್ದೆವು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಇದೇ ತಿಂಗಳ 29ರಂದು ರಾಜ್ಯ ಕಾರ್ಯಕಾರಣಿ ಸಭೆ ಕರೆಯಲಿದ್ದೇವೆ. ಅದಕ್ಕಾಗಿ ಪೂರ್ವಭಾವಿ ಸಿದ್ಧತೆ ಹಾಗೂ ಇತರ ಕೆಲವೊಂದಷ್ಟು ವಿಚಾರಗಳ ಕುರಿತು ಚರ್ಚಿಸಿದ್ದೇವೆ ಎಂದಿದ್ದಾರೆ.

ಒಂದು ವೇಳೆ ಅವರು ಬರದೇ ಇದ್ರು ಯಾರಾದರೂ ಪ್ರಮುಖರನ್ನು ಕಳುಹಿಸಿಕೊಡಬಹುದು ಎಂದಿದ್ದು, ಈ ರಾಜಕೀಯ ಜಂಜಾಟಕ್ಕೂ ನಮಗೂ ಸಂಬಂಧವಿಲ್ಲ. ಇನ್ನು ಮಾಧ್ಯಮದಲ್ಲಿ ಬರುತ್ತಿರುವ ವಿಚಾರಗಳಿಗೆ ಕವಡೆ ಕಾಸಿನಷ್ಟೂ ಕಿಮ್ಮತ್ತಿಲ್ಲ. ಅವರವರೇ ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾರೆ. ಅದು ಅವರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ಯಾವುದೇ ಸ್ಪಷ್ಟತೆ ಇಲ್ಲದಿರುವಂತಹ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಒಂದು ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ಇವರಿಬ್ಬರ ಗೊಂದಲದ ರಾಜಕೀಯದ ಮಧ್ಯೆ ನಾವು ಮಧ್ಯಪ್ರವೇಶಿಸಲು ಇಷ್ಟಪಡಲ್ಲ. ನಮ್ಮ ಬಿಜೆಪಿ ನಾಯಕರುಗಳಿಗೆ ವಿನಂತಿ ಮಾಡಿಕೊಂಡಿದ್ದೇನೆ. ಇಂತಹ ಸಂದರ್ಭದಲ್ಲಿ ಯಾವುದೇ ಮಾತನಾಡದೇ ಮೌನವಾಗಿದ್ದುಕೊಂಡು ರಾಜಕೀಯ ಬೆಳವಣಿಗೆಗಳನ್ನು ಗಮನಿಸುವಂತೆ ಹೇಳಿದ್ದೇನೆ. ಪ್ರತಿಪಕ್ಷವಾಗಿ ನಮ್ಮ ಕೆಲಸವನ್ನು ಗೌರವಯುತವಾಗಿ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com