ಮತ್ತೆ ಶುರುವಾಯ್ತಾ ಆಪರೇಷನ್‌ ಕಮಲ ? : ಅಮಿತ್ ಶಾ ಭೇಟಿಯಾಗಲು ಗುಜರಾತ್‌ಗೆ ದೌಡಾಯಿಸಿದ BSY

ಅಹಮದಾಬಾದ್‌ : ಮಾಜಿ ಸಿಎಂ ಯಡಿಯೂರಪ್ಪ ಅಹಮದಾಬಾದ್‌ಗೆ ದಿಢೀರ್ ಭೇಟಿ ನೀಡಿದ್ದು, ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಆಪರೇಷನ್‌ ಕಮಲ ಶುರವಾಗುವ ಭಯ ಜೆಡಿಎಸ್‌, ಕಾಂಗ್ರೆಸ್ ನಾಯಕರಲ್ಲಿ ಶುರುವಾಗಿದೆ.

ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಪ್ರಾರಂಭವಾಗಿದ್ದು, ಬಜೆಟ್ ಮಂಡನೆ ಹಾಗೂ ಸಾಲಮನ್ನಾ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಕುಮಾರಸ್ವಾಮಿ ಮಧ್ಯೆ ಶೀತಲ ಸಮರ ಏರ್ಪಟ್ಟಿರುವುದು ಬಹಿರಂಗವಾಗಿದೆ. ಅಲ್ಲದೆ ಸಿದ್ದರಾಮಯ್ಯ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿ ಸಾಲಮನ್ನಾ ವಿಚಾರದ ಕುರಿತು ಅಸಮಾಧಾನ ಹೊರಹಾಕಿದ್ದಾರೆ.

ಇಷ್ಟು ದಿನ ಲೋಕಸಭಾ ಚುನಾವಣೆಯವರೆಗೂ ಸುಮ್ಮನಿದ್ದು, ಬಳಿಕ ರಾಜ್ಯದ ದೋಸ್ತಿ ಸರ್ಕಾರದ ಬಗ್ಗೆ ಯೋಚಿಸೋಣ ಎಂದಿದ್ದ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತೆ ಮೈತ್ರಿ ಸರ್ಕಾರದ ನಾಯಕರ ಮಧ್ಯೆ ನಡೆಯುತ್ತಿರುವ ಜಗಳದ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ರಾಜಕೀಯ ಮೂಲಗಳು ಹೇಳುತ್ತಿವೆ.

ಈ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ನಾಯಕರನ್ನು ಸೆಳೆಯುವ ನಿಟ್ಟಿನಲ್ಲಿ ಯಡಿಯೂರಪ್ಪ, ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

 

 

Leave a Reply

Your email address will not be published.

Social Media Auto Publish Powered By : XYZScripts.com