ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡಿಯೇ ಸಿದ್ಧ : ಯೋಗಿ ಆದಿತ್ಯನಾಥ್

ಲಖನೌ : ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡೇ ಮಾಡುತ್ತೇನೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ನಡೆದ ಸಂತ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ. ಪ್ರಜಾಪ್ರಭುತ್ವ ದೇಶದಲ್ಲಿ  ಶಾಸಕಾಂಗ, ನ್ಯಾಯಾಂಗ ತನ್ನದೇ ಆದ ಅಧಿಕಾರವನ್ನು ಹೊಂದಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದಾಗಿ ಹೇಳಿದ್ದಾರೆ.

ಇದೇ ವೇಳೆ ಶ್ರೀರಾಮ ಜಗತ್ತಿನ ಒಡೆಯ ಎಂದಿರುವ ಯೋಗಿ ಆದಿತ್ಯನಾಥ್‌, ಆತನ ಮಂದಿರ ನಿರ್ಮಾಣವಾಗಿಯೇ ಆಗುತ್ತದೆ. ಇದರ ಬಗ್ಗೆ ಯಾವುದೇ ಗೊಂದಲವಿಲ್ಲ. ಸಾದು ಸಂತರ ಮೇಲೆ ನಂಬಿಕೆಯಿಡಿ. ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com