ಸಿದ್ದರಾಮಯ್ಯ ವಿರುದ್ಧವೇ ತಿರುಗಿಬಿದ್ದರಾ ಡಿಕೆಶಿ : ಮಾಜಿ ಸಿಎಂಗೆ ಟಾಂಗ್‌ ನೀಡಿದ ಟ್ರಬಲ್ ಶೂಟರ್ ?

ಬೆಂಗಳೂರು : ಬಜೆಟ್ ವಿಚಾರ ಸಂಬಂಧ ಸಿದ್ದರಾಮಯ್ಯ ವಿರುದ್ದ ಆಪ್ತರೇ ತಿರುಗಿಬೀಳುತ್ತಿದ್ದಾರೆ. ಈಗ ಆ ಸಾಲಿಗೆ ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌ ಎಂದೇ ಖ್ಯಾತರಾಗಿರುವ ಡಿ.ಕೆ ಶಿವಕುಮಾರ್‌ ಸಹ ಸೇರ್ಪಡೆಯಾಗಿದ್ದು, ಸಿದ್ದರಾಮಯ್ಯನವರಿಗೆ ಟಾಂಗ್‌ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ. ಸಿದ್ದರಾಮಯ್ಯ ಲೋಕಾಭಿರಾಮವಾಗಿ ಹೇಳಿದ ಮಾತನ್ನು ಕಿಡಿಗೇಡಿಗಳು, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಜೆಡಿಎಸ್ ಜತೆ ಕಾಂಗ್ರೆಸ್ ನಾಯಕರು ಅಶೋಕ ಹೋಟೆಲ್​​ನಲ್ಲಿ ಮಾಡಿಕೊಂಡ ಒಪ್ಪಂದವೇ ಅಧಿಕೃತ. ಯಾರೂ ಕೂಡ ಪಕ್ಷದ ಬಗ್ಗೆಯಾಗಲಿ ಮೈತ್ರಿಯ ಬಗ್ಗೆಯಾಗಲೀ ಹೇಳಿಕೆ ನೀಡುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. 

ಮೈತ್ರಿ ಬೆಂಗಳೂರಿಗೆ ಸೀಮಿತ‌, ಮಂಡ್ಯಕ್ಕಲ್ಲ ಎಂಬ ಹೇಳಿಕೆಯೂ ಸರಿಯಲ್ಲ. ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದೂ ಸರಿಯಲ್ಲ. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷವೇ ಅಂತಿಮ. ಚುನಾವಣಾ ಹೊಂದಾಣಿಕೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಿರುತ್ತವೆ ಎಂದು ಟಾಂಗ್ ನೀಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com