ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ ? : ಕೈ ನಾಯಕ !

ಧರ್ಮಸ್ಥಳ : ಸಿದ್ದರಾಮಯ್ಯ ಅವರನ್ನು ನಿರ್ಲಕ್ಷ್ಯ ಮಾಡಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುವುದಿಲ್ಲ ಎಂದು ಬಸವ ಕಲ್ಯಾಣದ ಶಾಸಕ ಬಿ. ನಾರಾಯಣ ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಭೇಟಿ ಮಾಡಲು ಶಾಂತಿವನಕ್ಕೆ ಬಂದ ಶಾಸಕರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,
ಸಿದ್ದರಾಮಯ್ಯ ನಮ್ಮ ನಾಯಕರು, ನಾವು 80 ಶಾಸಕರು ಅವರ ನೇತೃತ್ವದಲ್ಲಿ ಆಯ್ಕೆ ಆಗಿದ್ದೇವೆ. ಅವರ ಮಾರ್ಗದರ್ಶನದಲ್ಲೇ ಸರಕಾರ ನಡೆಯುತ್ತಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅವರನ್ನು ಯಾರಾದರೂ ನಿರ್ಲಕ್ಷ್ಯ ಮಾಡಲು ಸಾಧ್ಯವೇ? ಯಾವ ನನ್ಮಗ ನಿರ್ಲಕ್ಷ್ಯ ಮಾಡಲು ಸಾಧ್ಯ. ನಿರ್ಲಕ್ಷ್ಯ ಮಾಡಿದರೆ ಸರಕಾರ ಉಳಿಯುತ್ತಾ ಎಂದು ಪ್ರಶ್ನಿಸಿದ್ದಾರೆ.

One thought on “ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ ? : ಕೈ ನಾಯಕ !

  • June 28, 2018 at 7:10 AM
    Permalink

    It’s genuinely very complicated in this busy life to listen news on Television, thus I just use internet for that purpose, and obtain the most up-to-date information.

    Reply

Leave a Reply

Your email address will not be published.