ಸ್ವಪಕ್ಷೀಯ ನಾಯಕನಿಂದಲೇ ಎಂಎಲ್‌ಎಗೆ ಕಿರುಕುಳ : ವಿಧಾನಸಭೆಯಲ್ಲಿ ಗಳಗಳನೆ ಅತ್ತ ಬಿಜೆಪಿ ಶಾಸಕಿ !

ಭೋಪಾಲ್ : ತಮ್ಮದೇ ಪಕ್ಷದ ನಾಯಕನೊಬ್ಬನಿಂದ ತಮಗೆ ತೊಂದರೆಯಾಗುತ್ತಿದ್ದು ಬಿಜೆಪಿ ನಾಯಕನ ಆದೇಶದ ಮೇರೆಗೆ ಪೊಲೀಸರು ತಮ್ಮ ಕುಟುಂಬಸ್ಥರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಶಾಸಕಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದು, ವಿಧಾನಸಭೆಯಲ್ಲೇ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.

ಮಧ್ಯಪ್ರದೇಶದಲ್ಲಿ ಮಂಗಳವಾರ ನಡೆದ ವಿಧಾನಸಭಾ ಕಲಾಪದ ಶೂನ್ಯ ಅವಧಿಯ ವೇಳೆ ಮಾತನಾಡಿದ ಬಿಜೆಪಿ ಶಾಸಕಿ  ನೀಲಂ ಅಭಯ್‌ ಮಿಶ್ರಾ, ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪೊಲೀಸರು ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದು, ನಮಗೆ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ ನಮ್ಮ ಕುಟುಂಬಕ್ಕೆ ಭಯವಿದೆ. ನಮಗೆ ರಕ್ಷಣೆ ನೀಡಿ ಎಂದು ಮನವಿ ಮಾಡಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅಲ್ಲದೆ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡಲು ತಮ್ಮ ಪಕ್ಷದ ನಾಯಕನೇ ಕಾರಣ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟಿದ್ದಾರೆ. ವಿಪಕ್ಷ ನಾಯಕರು ನೀಲಂ ಪರ ನಿಂತಿದ್ದು, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com