ಖರ್ಗೆಗೆ ಡಬಲ್‌ ಧಮಾಕಾ : ಮಹಾರಾಷ್ಟ್ರ ಉಸ್ತುವಾರಿ ಜೊತೆ ಮತ್ತೊಂದು ಹುದ್ದೆ ನೀಡಿದ ಹೈಕಮಾಂಡ್

ಕೆಲ  ದಿನಗಳ ಹಿಂದಷ್ಟೇ ಮಲ್ಲಿಕಾರ್ಜುನ ಖರ್ಗೆಯವರ ನ್ನು ಮಹಾರಾಷ್ಟ್ರ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈಗ ಮತ್ತೊಂದು ಜವಾಬ್ದಾರಿ ನೀಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ಉಸ್ತುವಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಖಗೆ೯, ರಾಹುಲ್​ ಗಾಂಧಿ ಅವರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಎರಡೆರಡು ಜವಾಬ್ದಾರಿ ನೀಡಿರುವುದಕ್ಕೆ ರಾಹುಲ್ ಗಾಂಧಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.

ಇನ್ನು ಮಹಾರಾಷ್ಟ್ರ ನನಗೆ‌ ಹೊಸದಲ್ಲ, ಹಿಂದೆ ಬೇರೆ ರೀತಿಯ ಕೆಲಸ ಮಾಡಿದ್ದೇನೆ. ಈಗ ಉಸ್ತುವಾರಿ ಜವಾಬ್ದಾರಿ ಪಡೆದಿದ್ದೇನೆ. ನನಗೆ ಕೊಟ್ಟಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com