ಬೆಳಗಾವಿ : ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಕಿರುಕುಳ : ಬೇಸತ್ತ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ

ಬೆಳಗಾವಿ : ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಕಿರುಕುಳ ನೀಡುತ್ತಿದ್ದ ಗಂಡನ ಮನೆಯವರ ಧೋರಣೆಗೆ ಬೇಸತ್ತು ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಯರಮಾಳ ಗ್ರಾಮದಲ್ಲಿ ನಡೆದಿದೆ. ಸುರೇಖಾ ತಳವಾರ ಆತ್ಮಹತ್ಯೆಗೆ ಶರಣಾದ ಗೃಹಿಣಿ, ಕಳೆದ ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಸುರೇಖಾಗೆ ಮಕ್ಕಳಾಗಿರಲಿಲ್ಲ.

ಈ ಕಾರಣಕ್ಕೆ ನಿತ್ಯವೂ ಗಂಡ ಪರಶುರಾಮ್ ಹಾಗೂ ಆತನ ತಂದೆ ತಾಯಿ ನಿತ್ಯವೂ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಕಳೆದ ರಾತ್ರಿ ಸುರೇಖಾ ಗಂಡನ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಗಂಡ ಹಾಗೂ ಅತ್ತೆ ಮಾವನ ವಿರುದ್ದ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಗೃಹಿಣಿ ಕುಟುಂಬಸ್ಥರು ಮದುವೆಯಾದಾಗಿನಿಂದಲೂ ಈಕೆಗೆ ನಿತ್ಯವೂ ಕಿರುಕುಳ ನೀಡುತ್ತಿದ್ದ ಮೂರು ಜನರೇ ನಮ್ಮ ಮಗಳ ಪ್ರಾಣ ತೆಗೆದಿದ್ದಾರೆ ಎಂದು ಆರೋಪಿಸುತ್ತಿದ್ದು ಹೀಗಾಗಿ ಅವರಿಗೆ ಜೀವಾವಧಿ ಶಿಕ್ಷೆ ನೀಡಿ ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com