ಕೆಂಪೇಗೌಡರ ಹೆಸರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆ : ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಅರಮನೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕುಮಾರಸ್ವಾಮಿ. ರಾಜ್ಯದ ಒಟ್ಟಾರೆ ಆದಾಯದ ಶೇ. 60 ರಿಂದ 65 ರಷ್ಟು ಬೆಂಗಳೂರಿನದ್ದೇ ಆಗಿದ್ದು ಇದನ್ನು ರಾಜ್ಯದ ಅಭಿವೃದ್ಧಿಗೆ ಬಳಸಲಾಗುವುದು. ರಾಜ್ಯಾದ್ಯಂತ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು. ಕೆಂಪೇಗೌಡ ಅವರ ಭವನ ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಅದಕ್ಕಾಗಿ ಹಣ ಮೀಸಲಿಡಲಾಗುವುದು ಎಂದು ತಿಳಿಸಿದರು.

ಇನ್ನ ಸಭೆಯಲ್ಲಿ ಭಾಗಿಯಾಗಿದ್ದ ಸಚಿವ ಡಿ.ಕೆ. ಶಿವಕುಮಾರ್  ಮಾತನಾಡಿ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಶಾಲಾ ಪಠ್ಯ ಪುಸ್ತಕಗಳಲ್ಲಿ ಅವರ ಬಗ್ಗೆ ಪಠ್ಯವನ್ನು ಸೇರ್ಪಡಿಗೊಳಿಸಲಾಗುವುದು. ಕೆಂಪೇಗೌಡ ಜಯಂತಿಯನ್ನು ನಾಡಹಬ್ಬವಾಗಿ ಆಚರಿಸಲಾಗುವುದು.  ಅಲ್ಲದೆ ಬೆಂಗಳೂರು ನಗರವನ್ನು ಮಾದರಿ ನಗರವನ್ನಾಗಿಸಲು ಶ್ರಮಿಸಲಾಗುವುದೆಂದು ತಿಳಿಸಿದರು.

 

Leave a Reply

Your email address will not be published.

Social Media Auto Publish Powered By : XYZScripts.com