ಶಿಕ್ಷಣ ಇಲಾಖೆಯಿಂದ ಹೊಸ ನಿಯಮ : ವಿದ್ಯಾರ್ಥಿಗಳು ಕಡಿಮೆ ಅಂಕ ಗಳಿಸಿದರೆ, ಶಿಕ್ಷಕರಿಗೆ ಶಿಕ್ಷೆ

ಬೆಂಗಳೂರು : ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಒಳ್ಳೆಯ ಮಾರ್ಗದಲ್ಲಿ ನಡೆಸಲು ಅವರ ಪೊಷಕರು ಎಷ್ಟು ಮುಖ್ಯವೋ ಶಾಲೆಯಲ್ಲಿ ಶಿಕ್ಷಕರು ಕೂಡ  ಅಷ್ಟೇ ಮುಖ್ಯವಾಗಿರುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಇಲಾಖೆ, ಖಾಸಗಿ ಅನುದಾನಿತ ಶಾಲೆಗಳಲ್ಲಿ ಹತ್ತನೇ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬಂದರೆ ಅವರಿಗೆ ಪಾಠ ಹೇಳಿಕೊಟ್ಟ ಶಿಕ್ಷಕರಿಗೆ ಶಿಕ್ಷೆ ನೀಡುವುದಾಗಿ  ಮುಂದಾಗಿದೆ ಸರ್ಕಾರ.

ರಾಜ್ಯದಲ್ಲಿ ಹತ್ತನೇ ತರಗತಿಯಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಖಾಸಗಿ ಅನುದಾನಿತ ಶಾಲೆಗಳು ಎಷ್ಟಿವೆ ಎಂದು ಪಟ್ಟಿ ನೀಡುವಂತೆ ಸಾರ್ವಜನಿಕ ನಿರ್ದೇಶನಾಯಲದ  ಉಪನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದೆ.

exam holl 10th student ಗೆ ಚಿತ್ರದ ಫಲಿತಾಂಶ

ಇಂತಹ ಶಾಲೆಗಳ ಶಿಕ್ಷಕರ ಜೂನ್ ತಿಂಗಳ ವೇತನವನ್ನು ತಡೆಹಿಡಿಯಲಾಗುತ್ತದೆ. ಕಳೆದ 5ವರ್ಷಗಳಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಫಲಿತಾಂಶ ಸರಾಸರಿಗಿಂತ ಕಡಿಮೆಯಿರುವ  ಶಾಲೆಗಳ ಶಿಕ್ಷಕರ ಈ ತಿಂಗಳ ವೇತನವನ್ನು ತಡೆಹಿಡಿಯಲು ಸುತ್ತೋಲೆಯಲ್ಲಿ ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಖಾಸಗಿ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರಿಗೆ ರಾಜ್ಯ ಸರ್ಕಾರ ವೇತನ ನೀಡುತ್ತದೆ. ಶಿಕ್ಷಕರಿಗೆ ವೇತನ ನೀಡಿಕೆಯಲ್ಲಿ ತಡೆಹಿಡಿಯುವ ಮೂಲಕ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಮುಂದಿನ ದಿನಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಫಲಿಂತಾಂಶದಲ್ಲಿ ಹೆಚ್ಚಳ ಕಾಣಬಹುದು ಎನ್ನತ್ತಾರೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಇಲಾಖೆ ಅಧಿಕಾರಿಗಳು.

ಇನ್ನ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಕರೊಬ್ಬರು ಇಂತಹ ಕ್ರಮಕ್ಕೆ ಸರ್ಕಾರ ಮುಂದಾದರೆ ನಾವು ಶಿಕ್ಷಕ ವೃತ್ತಿಯನ್ನು ಬಿಡಬೇಕು ಇಲ್ಲವೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎನುತ್ತಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಅರುಣ್ ಸಹಪುರ ಸಹ ಶಿಕ್ಷಕರ ಪರವಾಗಿ ನಿಂತಿದ್ದಾರೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com