ಕಾಂಗ್ರೆಸ್-JDS ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ, ಯಾವುದೇ ಸಂಶಯವಿಲ್ಲ : ಸಿದ್ದರಾಮಯ್ಯ

‘ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೂಡಿ ರಚಿಸಿರುವ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಲಿದೆ, ಅದರಲ್ಲಿ ಯಾವುದೇ ಸಂಶಯವಿಲ್ಲ ‘ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಭವಿಷ್ಯದ ಕುರಿತು ಸಂಶಯ ವ್ಯಕ್ತಪಡಿಸಿ ಮಾತನಾಡಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

‘ 2019ರ ಲೋಕಸಭೆ ಚುನಾವಣೆವರೆಗೆ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಮುಂದೇನಾಗುತ್ತದೆಯೋ ಕಾದು ನೋಡೋಣ’ ಎಂದು ವಿಡಿಯೋದಲ್ಲಿ ಮಾಜಿ ಸಿಎಂ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈಗ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಿಎಂ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯಕ್ಕೆ ಆರೋಗ್ಯ ಚಿಕಿತ್ಸೆ ಪಡೆಯಲು ತೆರಳಿದ್ದರು. ಈ ವೇಳೆ ರಾಜ್ಯದ ರಾಜಕೀಯ ಗಣ್ಯರು ಚಿಕಿತ್ಸಾಲಯಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com