ಹಾಸನ : ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ಬಂಧನ : ಚಾಕು, ಖಾರದಪುಡಿ ವಶ

ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಸಕಲೇಶಪುರ ತಾಲ್ಲೂಕು ಬ್ಯಾಕರವಳ್ಳಿ ವೃತ್ತದಲ್ಲಿ ನಡೆದಿದೆ. ಬಳಿಕ ಆತನನ್ನು ಬಂಧಿಸಿರುವ ಪೋಲೀಸರು ವ್ಯಕ್ತಿಯಿಂದ ಡ್ರಾಗನ್ ಚಾಕು ಮತ್ತು ಖಾರದಪುಡಿಯನ್ನು ವಶಪಡಿಸಿಕೊಂಡಿದ್ದಾರೆ.

ದರೋಡೆ ಮಾಡುವ ಉದ್ದೇಶದಿಂದ ಚಾಕು ಮತ್ತು ಖಾರದಪುಡಿ ಬಳಕೆ ಮಾಡುತ್ತಿದ್ದ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ದ್ವಿಚಕ್ರ ವಾಹನವನ್ನೂ ಸಹ ಪೋಲೀಸರು ವಶಪಡಿಸಿಕೊಂಡಿದ್ದಾರೆ. ದ್ವಿಚಕ್ರ ವಾಹನ ಕಳವು ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

 

 

 

Leave a Reply

Your email address will not be published.

Social Media Auto Publish Powered By : XYZScripts.com