ರಾಮನಗರ : ಸಿಎಂ ಸ್ವಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಮಹಿಳೆಯರ ಪ್ರತಿಭಟನೆ..

ರಾಮನಗರ : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಕಾನೂನಿಗಾಗಿ ಮಹಿಳೆಯರ ಪ್ರತಿಭಟನೆ ನಡೆಸಿದ್ದಾರೆ. ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿ ಮುಂದೆ ಕುಳಿತು ಧರಣಿ ನಡೆಸಿದ್ದಾರೆ.

ಸ್ವರಾಜ್ ಸಂಘಟನೆಯ ಮಹಿಳಾ ಕಾರ್ಯಕರ್ತರು ಧರಣಿ ನಡೆಸಿದ್ದು, ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಕ್ಷೇತ್ರದಲ್ಲಿನ ಕಾನೂನು ಸುವ್ಯವಸ್ಥೆಯನ್ನ ಖಂಡಿಸಿ ಹೋರಾಟ ನಡೆಸಿದ್ದಾರೆ. ಪೊಲೀಸ್ ಇಲಾಖೆ ಚನ್ನಪಟ್ಟಣದಲ್ಲಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಬಾಗಿಲಲ್ಲೇ ಕುಳಿತು ಪ್ರತಿಭಟನಾನಿರತ ಮಹಿಳೆಯರು ಊಟ ಮಾಡುತ್ತಿದ್ದಾರೆ. ಚುರುಕಾಗಿ ಕೆಲಸ ಮಾಡಲು ಶೀಘ್ರವೇ ಅಧಿಕಾರಿಗಳಿಗೆ ಸರ್ಕಾರ ಸೂಚಿಸಬೇಕೆಂದು ಒತ್ತಾಯ ಪಡಿಸಿದ್ದಾರೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಒತ್ತಾಯ ಹೇರಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com