Cricket : ಐರ್ಲೆಂಡ್ ವಿರುದ್ಧ ಅಮೋಘ ಜಯ : ಸರಣಿ 2-0 ಕ್ಲೀನ್ ಸ್ವೀಪ್ ಮಾಡಿದ ಭಾರತ

ಡಬ್ಲಿನ್ ನಲ್ಲಿ ಶುಕ್ರವಾರ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ 143 ರನ್ ಗಳಿಂದ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ ಟೀಮ್ ಇಂಡಿಯಾ ಸರಣಿಯನ್ನು 2-0 ಕ್ಲೀನ್ ಸ್ವೀಪ್ ಮಾಡಿದೆ.

ಟಾಸ್ ಗೆದ್ದ ಐರ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ 4 ವಿಕೆಟ್ ನಷ್ಟಕ್ಕೆ 213 ರನ್ ಮೊತ್ತ ಕಲೆಹಾಕಿತು. ಭಾರತದ ಪರವಾಗಿ ಕೆ.ಎಲ್ ರಾಹುಲ್ (70) ಸುರೇಶ್ ರೈನಾ (69) ಅರ್ಧಶತಕ ಬಾರಿಸಿದರು. ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೇವಲ 9 ಎಸೆತಗಳಲ್ಲಿ 32 ರನ್ ಬಾರಿಸಿ ಮಿಂಚಿದರು.

Image result for india ireland cricket 2-0 T20

ಗುರಿಯನ್ನು ಬೆನ್ನಟ್ಟಿದ ಐರ್ಲೆಂಡ್ 12.3 ಓವರುಗಳಲ್ಲಿ 70ಕ್ಕೆ ಆಲೌಟ್ ಆಯಿತು. ಭಾರತದ ಪರವಾಗಿ ಕುಲದೀಪ್ ಯಾದವ್ 3, ಯಜುವೇಂದ್ರ ಚಹಲ್ 3 ಹಾಗೂ ಉಮೇಶ್ ಯಾದವ್ ವಿಕೆಟ್ ಪಡೆದರು.

Leave a Reply

Your email address will not be published.

Social Media Auto Publish Powered By : XYZScripts.com