ದಾವಣಗೆರೆ : 7 ವರ್ಷದ ಬಾಲಕಿ ದಿವ್ಯಾ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ..

ದಾವಣಗೆರೆ : ಏಳು ವರ್ಷದ ಬಾಲಕಿ ದಿವ್ಯ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಎರಡು ತಿಂಗಳ ಹಿಂದೆ ಮಧ್ಯಪ್ರದೇಶದಲ್ಲಿ ಅತ್ಯಾಚಾರ ನಡೆದಿತ್ತು. ಘಟನೆಯ ವಿರುದ್ಧ ಹಿಂದೂ ಪರ ಸಂಘಟನೆಗಳಿಂದ ದಾವಣಗೆರೆಯ ರಾಮ್ ಅಂಡ್ ಕೋ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗಿದೆ.

  

ಬಾಲಕಿ ಮೇಲಿನ ಹೀನ ಕೃತ್ಯವನ್ನು ಖಂಡಿಸಿ ಯುವವಾಹಿನಿ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಒತ್ತಾಯ ಪಡಿಸಲಾಗಿದೆ. ಪ್ರತಿಭಟನಾಕಾರರು ಕ್ಯಾಂಡಲ್ ಬೆಳಗಿಸುವುದರ ಮೂಲಕ ಬಾಲಕಿ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗಿಯಾದ್ದರು.

Leave a Reply

Your email address will not be published.