ಹಾವೇರಿ : ಕೆಎಸ್ಆರ್ಟಿಸಿ ಬಸ್ ಪಲ್ಟಿ : ನಾಲ್ಕು ವಿದ್ಯಾರ್ಥಿಗಳಿಗೆ ಗಾಯ

ಹಾವೇರಿ : ಕೆಎಸ್ಆರ್ಟಿಸಿ ಬಸ್ ಪಲ್ಟಿ ನಾಲ್ಕು ವಿದ್ಯಾರ್ಥಿಗಳಿಗೆ ಗಾಯಗೊಂಡಿರು ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರ ತಾಲ್ಲೂಕಿನ ಹಿರೇಮೊರಬ ಗ್ರಾಮದ ಬಳಿ ನಡೆದಿದೆ. ಮಾಸುರಿಂದ ರಾಣೆಬೇನ್ನೂರ ಕಡೆ ಹೊರಟಿದ್ದ ಬಸ್ ಪಲ್ಟಿಯಾಗಿದೆ.

ಬಸ್ ನಲ್ಲಿದ್ದ ನಾಲ್ವರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಾಸುರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಂತರ ಬಸ್ ಚಾಲಕ ನಿರ್ವಾಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬಸ್ ನಲ್ಲಿದ್ದ 27 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಹಿರೇಕೆರೂರ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com