T20-Cricket : ಬುಮ್ರಾ, ವಾಷಿಂಗ್ಟನ್ ಸುಂದರ್ ಗೆ ಗಾಯ : ಚಾಹರ್, ಕೃಣಾಲ್ ಪಾಂಡ್ಯಗೆ ಅವಕಾಶ

ಇಂಗ್ಲೆಂಡ್ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ-20 ಸರಣಿಯಲ್ಲಿ ಗಾಯಾಳು ಜಸ್ಪ್ರೀತ್ ಬೂಮ್ರಾ ಅವರ ಬದಲಿಗೆ ದೀಪಕ್ ಚಾಹರ್ ಗೆ ಅವಕಾಶ ನೀಡಲಾಗಿದೆ. ಮತ್ತೋರ್ವ ಗಾಯಾಳು ಸ್ಪಿನ್ ಬೌಲರ್ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಆಲ್ರೌಂಡರ್ ಕೃಣಾಲ್ ಪಾಂಡ್ಯಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿದೆ.

Image result for deepak chahar krunal pandya

ಡೆತ್ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ವಾಷಿಂಗ್ಟನ್ ಸುಂದರ್ ಬಲಗಾಲಿನ ಪಾದದ ಗಾಯಕ್ಕೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ಆಟಗಾರರು ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಯಲ್ಲಿ ಆಡುವುದಿಲ್ಲ ಎಂದು ಬಿಸಿಸಿಐ ಶನಿವಾರ ಹೇಳಿತ್ತು. ಇವರಿಬ್ಬರ ಅನುಪಸ್ಥಿತಿಯಲ್ಲಿ ದೀಪಕ್ ಚಾಹರ್ ಹಾಗೂ ಕೃಣಾಲ್ ಪಾಂಡ್ಯಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಭಾನುವಾರ ತಿಳಿಸಿದೆ.

Leave a Reply

Your email address will not be published.