Cricket : ಇಂದಿನಿಂದ ಭಾರತ – ಇಂಗ್ಲೆಂಡ್ T20 ಸರಣಿ : ಮ್ಯಾಂಚೆಸ್ಟರ್ ಅಂಗಳದಲ್ಲಿ ಮೊದಲ ಪಂದ್ಯ

ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೊರ್ಡ್ ಮೈದಾನದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಮಂಗಳವಾರ ಮೊದಲ ಟಿ-20 ಪಂದ್ಯ ನಡೆಯಲಿದೆ. ಉಭಯ ತಂಡಗಳು ಸರಣಿಯನ್ನು ಗೆಲುವಿನೊಂದಿಗೆ ಶುಭಾರಂಭ ಮಾಡುವ ತವಕದಲ್ಲಿವೆ.

ಐರ್ಲೆಂಡ್ ವಿರುದ್ಧದ ಟಿ-20 ಸರಣಿಯನ್ನು 2-0 ಕ್ಲೀನ್ ಸ್ವೀಪ್ ಮಾಡಿರುವ ಭಾರತ ವಿಶ್ವಾಸದಲ್ಲಿದೆ. ಇನ್ನೊಂದೆಡೆ ಆತಿಥೇಯ ಇಂಗ್ಲೆಂಡ್ ತಂಡ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 5-0 ರಿಂದ ಗೆದ್ದು ವೈಟ್ ವಾಷ್ ಸಾಧನೆಗೈದು ಬೀಗುತ್ತಿದೆ.

ಎಡಗೈ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ದೀಪಕ್ ಚಾಹರ್ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಅವರ ಬಲಗಾಲಿನ ಪಾದಕ್ಕೆ ಗಾಯವಾಗಿರುವ ಹಿನ್ನೆಲೆಯಲ್ಲಿ ಆಲ್ರೌಂಡರ್ ಕೃಣಾಲ್ ಪಾಂಡ್ಯಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com