Cricket : ಕೆ.ಎಲ್ ರಾಹುಲ್ ಭರ್ಜರಿ ಶತಕ : 5 ವಿಕೆಟ್ ಪಡೆದ ಕುಲದೀಪ್ : ಭಾರತಕ್ಕೆ ಗೆಲುವು

ಮ್ಯಾಂಚೆಸ್ಟರ್ ನಗರದ ಓಲ್ಡ್ ಟ್ರಾಫೊರ್ಡ್ ಮೈದಾನದಲ್ಲಿ ಮಂಗಳವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾರತ 8 ವಿಕೆಟ್ ಜಯ ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಮ್ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರುಗಳಲ್ಲಿ 8 ವಿಕೆಟ್ ಕಳೆದುಕೊಂಡು 159 ರನ್ ಮೊತ್ತ ಕಲೆಹಾಕಿತು. ಭಾರತದ ಪರವಾಗಿ ಚೈನಾಮನ್ ಬೌಲರ್ ಕುಲದೀಪ್ ಯಾದವ್ 5 ವಿಕೆಟ್ ಪಡೆದು ಮಿಂಚಿದರು.

Image result for kuldeep yadav 5 wickets england

ಗುರಿಯನ್ನು ಬೆನ್ನಟ್ಟಿದ ಭಾರತ 18.2 ಓವರುಗಳಲ್ಲಿ 2 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಗೆಲುವಿನ ದಡ ಸೇರಿತು. 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿಳಿದ ಕೆ.ಎಲ್ ರಾಹುಲ್ ಭರ್ಜರಿ ಶತಕ ಬಾರಿಸಿದರು. ಅಂತರಾಷ್ಟ್ರೀಯ ಟಿ-20ಯಲ್ಲಿ 2ನೇ ಶತಕ ದಾಖಲಿಸಿದ ರಾಹುಲ್ 54 ಎಸೆತಗಳನ್ನೆದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com