Cricket : T20ಯಲ್ಲಿ ವಿರಾಟ್ ವಿಶ್ವದಾಖಲೆ : ಅತಿ ವೇಗವಾಗಿ 2000 ರನ್ ಗಡಿ ದಾಟಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಓಲ್ಡ್ ಟ್ರಾಫೊರ್ಡ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಭಾರತ 8 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ.

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 2000 ರನ್ ಗಡಿ ದಾಟಿದ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. 56ನೇ ಇನ್ನಿಂಗ್ಸ್ ನಲ್ಲಿ ಎರಡು ಸಾವಿರ ರನ್ ಪೂರೈಸಿದ ಕೊಹ್ಲಿ ಅಜೇಯ 20 ರನ್ ಗಳಿಸಿದರು. ಎರಡು ಸಾವಿರ ರನ್ ಗಡಿ ದಾಟಿದ್ದೂ ಅಲ್ಲದೇ, ಭರ್ಜರಿ ಶತಕ ಬಾರಿಸಿದ ರಾಹುಲ್ ಜೊತೆಗೂಡಿ ಭಾರತವನ್ನು ಗೆಲುವಿನ ದಡ ಸೇರಿಸಿದರು.

2000ಕ್ಕೂ ಅಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ನ್ಯೂಜಿಲ್ಯಾಂಡಿನ ಮಾರ್ಟಿನ್ ಗಪ್ಟಿಲ್, ಬ್ರೆಂಡನ್ ಮೆಕ್ಕಲಂ ಹಾಗೂ ಪಾಕಿಸ್ತಾನದ ಶೋಯೆಬ್ ಮಲಿಕ್ ಇದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com