ಮೈಸೂರು : ಯೋಧನ ತಂದೆ ಮೇಲೆ ಹಲ್ಲೆ : ಪೋಲೀಸರಿಂದ ಇಬ್ಬರು ಆರೋಪಿಗಳ ಬಂಧನ

ಮೈಸೂರಿನ ಪಿರಿಯಾಪಟ್ಟಣದಲ್ಲಿ ಯೋಧ ಮಂಜುನಾಥ್ ತಂದೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸತೀಶ(30) ದುಶ್ಯಂತ(30) ಎಂಬ ಆರೋಪಿಗಳನ್ನು ಪಿರಿಯಾಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ 379,337,304,323 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪಿರಿಯಾಪಟ್ಟಣ ಮುತ್ತೂರು ಗ್ರಾಮದ ಯೋಧ ಮಂಜುನಾಥ್ ತಂದೆ ರಾಜಣ್ಣ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಸಾಮಾಜಿಕ ಜಾಲತಾಣದಲ್ಲಿ ಯೋಧ ಮಂಜುನಾಥ್ ಅಳಲು ತೋಡಿಕೊಂಡಿದ್ದರು. ಯೋಧ ಮಂಜುನಾಥ್ ವಿಡಿಯೋ ವೈರಲ್ ಆಗಿತ್ತು.  ಈ ಹಿನ್ನೆಲೆಯಲ್ಲಿ ಆರೋಪಿಗಳನ್ನ ಪಿರಿಯಾಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com