KPCC ಹೊಸ ಸಾರಥಿ ದಿನೇಶ್ ಗುಂಡೂರಾವ್ ಮುಂದಿದೆ ಸವಾಲುಗಳು ಬೆಟ್ಟ…….!

ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರ ವಹಿಸಿಕೊಂಡಂದಿನಿಂದ ಕೆಪಿಸಿಸಿ ಪಟ್ಟಕ್ಕೆ ಯಾರು ಏರುತ್ತಾರೆ ಎಂಬ ಬಗ್ಗೆ ಭಾರೀ ಕುತೂಹಲ ಸೃಷ್ಟಿಯಾಗಿತ್ತು. ಅವರ್ನ ಬಿಟ್ ಇವ್ರು, ಇವರ್ನ ಬಿಟ್ ಅವ್ರು ಅಂತ ಕಡೆಗೂ 48 ವರ್ಷದ ರಾಜಕಾರಣಿ ದಿನೇಶ್ ಗುಂಡೂ ರಾವ್ ಅವರಿಗೆ ಮಹತ್ತರ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಸಾಕಷ್ಟು ಅಳೆದುತೂಗಿ, ಲೋಕಸಭೆ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು, ಜನಪ್ರಿಯತೆಯ ಮಾನದಂಡವನ್ನೂ ಪರಿಗಣಿಸಿ ದಿನೇಶ್ ಗುಂಡೂ ರಾವ್ ಅವರಿಗೆ ರಾಹುಲ್ ಗಾಂಧಿ ಅವರು ಜವಾಬ್ದಾರಿ ನೀಡಿದ್ದಾರೆ. ಕರ್ನಾಟಕದಲ್ಲಿ ಬ್ರಾಮಣ ಲೊಂಗಾಯತ ಸಮುದಾಯಗಳ ಹೊಂದಿಸಿಕೊಂಡು ಹೊರಟಿದೆ ಕಾಂಗ್ರೆಸ್ ಪಕ್ಷ.  ಹೊಸದಾಗಿ ಕೆಪಿಸಿಸಿ ಪಟ್ಟಕ್ಕೆ ಬದಿರುವ ದಿನೇಶ್ ಗುಂಡೂ ರಾವ್ ಮುಂದೆ  ಸವಾಲುಗಳ ಬೆಟ್ಟವೇ ಇದೆ…

ರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಸಮ್ಮಿಶ್ರ ಸರ್ಕಾರವಿರುವ ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಪ್ತರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

 

2013ರ ಚುನಾವಣೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. 2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿ ನೂತನವಾಗಿ ನೇಮಕವಾಗಿರುವ ದಿನೇಶ್ ಗುಂಡೂರಾವ್ ಅವರ ಮುಂದೆ ರಾಜ್ಯಾದ್ಯಂತ ಸಂಚಾರ ನಡೆಸಿ ಪಕ್ಷವನ್ನು ಸಂಘಟನೆ ಮಾಡುವ ಜವಾಬ್ದಾರಿ ಇದೆ. ದಿನೇಶ್ ಗುಂಡೂರಾವ್ ಬೆಂಗಳೂರಿನವರು ಬೀದರ್‌ನಿಂದ ಚಾಮರಾಜನಗರದ ತನಕ ಸಂಚಾರ ನಡೆಸಿ ಪಕ್ಷವನ್ನು ಸಂಘಟನೆ ಮಾಡಬೇಕಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಸಂಘಟನೆಗೆ ಅವರು ಸಹಕಾರ ನೀಡಲಿದ್ದಾರೆ.

ಲೋಕಸಭೆ ಚುನಾವಣೆಗೆ ಸುಮಾರು 6 ತಿಂಗಳು ಇರುವಾಗ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರುವ ಸವಾಲು ಅವರ ಮುಂದಿದೆ. ಲೋಕಸಭೆ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಸೀಟುಗಳ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಮುಂತಾದ ವಿಚಾರಗಳಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಂಡು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಸವಾಲು ದಿನೇಶ್ ಗುಂಡೂರಾವ್ ಮುಂದಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಸಹ ಒಂದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಸರ್ಕಾರವನ್ನು ರಚನೆ ಮಾಡಿವೆ. ಮೈತ್ರಿ ಸರ್ಕಾರದಲ್ಲಿ ಹಲವು ಅಸಮಾಧಾನಗಳು ಬರುತ್ತವೆ. ಅವುಗಳನ್ನು ನಿವಾರಿಸಿಕೊಂಡು ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯತೆ ಸಾಧಿಸುವ ಸವಾಲು ನೂತನ ಅಧ್ಯಕ್ಷರ ಮುಂದಿದೆ. ಸಚಿವ ಸ್ಥಾನ ಹಂಚಿಕೆ, ನಿಗಮ ಮಂಡಳಿಗಳ ನೇಮಕ ಸೇರಿದಂತೆ ಹಲವು ವಿಚಾರಗಳಲ್ಲಿ ಎರಡೂ ಪಕ್ಷಗಳ ನಡುವೆ ಅಸಮಾಧಾನ ಉಂಟಾಗಬಹುದು. ಅವುಗಳನ್ನು ಸರಿದೂಗಿಸಿ, ಸಮ್ಮಿಶ್ರ ಸರ್ಕಾರ ಪತನವಾಗದಂತೆ ಕಾಪಾಡುವ ಹೊಣೆ ಕೆಪಿಸಿಸಿ ಅಧ್ಯಕ್ಷರ ಮೇಲಿದೆ.

ಕಾಂಗ್ರೆಸ್‌ ಪಕ್ಷದಲ್ಲಿ ನಾಯಕರಿಗೆ ಕೊರತೆ ಇಲ್ಲ. ಹಲವಾರು ಹಿರಿಯ ನಾಯಕರು ಇನ್ನೂ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಇಂತಹ ಸಮಯದಲ್ಲಿ ಕಿರಿಯ ವಯಸ್ಸಿನ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ದರಿಂದ, ಹಿರಿಯ ನಾಯಕರ ಜೊತೆ ಸಮನ್ವಯ ಕಾಪಾಡಿಕೊಂಡು ಹೋಗಬೇಕಾದ ಸವಾಲು ನೂತನ ಅಧ್ಯಕ್ಷರ ಮುಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com