ತುಮಕೂರು : ಕಾರು – ಲಾರಿ ಭೀಕರ ಅಪಘಾತ : ಬೆಂಗಳೂರು ಮೂಲದ ಐವರ ದುರ್ಮರಣ

ತುಮಕೂರು : ಸ್ವಿಫ್ಟ್ ಕಾರು ಮತ್ತು ಸಿಮೆಂಟ್ ತುಂಬಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗೇಟ್ ಬಳಿ ನಡೆದಿದೆ. ಇಂದು ಸಂಜೆ 5 ಗಂಟೆಯ ಸಮಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ನಿವಾಸಿಗಳಾದ ಮರುಳಿ (20 ) ಮಂಜುನಾಥ್ ( 24 ) ದಿನೇಶ್ (24 ) ರಾಮ್ ಮೋಹನ್ ( 23 ,) ಶಿವಪ್ರಸಾದ್ ( 25 ) ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದ್ದು, ಅತಿವೇಗದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ದೌಡಾಯಿಸಿದ್ದು , ಮೃತದೇಹಗಳನ್ನ ಹೊರತೆಗೆದು, ವಾಹನಗಳನ್ನ ತೆರವುಗೊಳಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮನ್ನ ತಿಳಿಗೊಳಿಸಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com