ತುಮಕೂರು : ಕಾರು – ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಮೂವರ ಸಾವು, ಓರ್ವನ ಸ್ಥಿತಿ ಗಂಭೀರ

ತುಮಕೂರು : ಕಾರು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ತುಮಕೂರಿನ ಕೆ.ಬಿ.ಕ್ರಾಸ್ ನ ಹಿಂಡಿಸ್ಕೆರೆ ಗ್ರಾಮದ ಬಳಿ ನಡೆದಿದೆ. ಒಬ್ಬ ಗಾಯಾಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಮೂಲದ ವಿನಯ್ ಕುಮಾರ್ ( 22) ಸಿರಾ ಬರಗೂರು ಗ್ರಾಮದ ತಿಪ್ಪೆಸ್ವಾಮಿ( 40), ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.

ಬೆಂಗಳೂರು‌ ಮೂಲದ ಅರವಿಂದ ( 32) ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ Bosch ಕಂಪನಿಯಲ್ಲಿ ಟೆಕ್ನಿಶಿಯನ್ ಗಳಾಗಿ‌ ಕೆಲಸ ಮಾಡುತ್ತಿದ್ದರು. ಶಿವಮೊಗ್ಗದಲ್ಲಿ ಸಹೋದ್ಯೋಗಿ ಮದುವೆಗೆ ತೆರಳಿ ವಾಪಾಸ್ಸಾಗುತ್ತಿದ್ದರು. ಕೆ.ಬಿ.ಕ್ರಾಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.