Cricket : ಕಾರ್ಡಿಫ್ ನಲ್ಲಿಂದು 2ನೇ ಟಿ-20 ಪಂದ್ಯ : ಸರಣಿ ಕೈವಶಕ್ಕೆ ಕೊಹ್ಲಿ ಪಡೆ ಯತ್ನ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಶುಕ್ರವಾರ ಕಾರ್ಡಿಫ್ ನ ಸೋಫಿಯಾ ಗಾರ್ಡನ್ ಮೈದಾನದಲ್ಲಿ 2ನೇ ಟಿ-20 ಪಂದ್ಯ ನಡೆಯಲಿದೆ. ಮೊದಲ ಮ್ಯಾಚ್ ನಲ್ಲಿ 8 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದ್ದ ಭಾರತ, ಸರಣಿಯನ್ನು ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ. ಇನ್ನೊಂದೆಡೆ ಆತಿಥೇಯ ಇಂಗ್ಲೆಂಡ್ ಭಾರತಕ್ಕೆ ತಿರುಗೇಟು ನೀಡುವ ಮೂಲಕ ಸರಣಿ ಉಳಿಸಿಕೊಳ್ಳಲು ಯತ್ನಿಸಲಿದೆ.

ಐಪಿಎಲ್ ಫಾರ್ಮ್ ನ್ನು ಮುಂದುವರೆಸಿ, ಮೊದಲ ಟಿ-20ಯಲ್ಲಿ ಭರ್ಜರಿ ಶತಕ ಬಾರಿಸಿದ್ದ ಆರಂಭಿಕ ಬ್ಯಾಟ್ಸಮನ್ ಕೆ.ಎಲ್ ರಾಹುಲ್ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಪ್ರಮುಖ 5 ವಿಕೆಟ್ ಗಳನ್ನು ಕಬಳಿಸಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದ ಕುಲದೀಪ್ ಯಾದವ್, ಕಾರ್ಡಿಫ್ ಪಂದ್ಯದಲ್ಲಿಯೂ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಕಟ್ಟಿಹಾಕಲು ಪ್ರಯತ್ನಿಸಲಿದ್ದಾರೆ.

ಇಂಗ್ಲೆಂಡಿನ ಆರಂಭಿಕ ಬ್ಯಾಟ್ಸಮನ್ ಜೋಸ್ ಬಟ್ಲರ್ ಉತ್ತಮ ಫಾರ್ಮ್ ನಲ್ಲಿದ್ದು ಭಾರತದ ಬೌಲರ್ಗಳಿಗೆ ಸವಾಲಾಗಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com