Cricket : ಇಂಗ್ಲೆಂಡ್ ಏಕದಿನ ಸರಣಿ : ಗಾಯಾಳು ಜಸ್ಪ್ರೀತ್ ಬದಲು ಶಾರ್ದೂಲ್‍ಗೆ ಅವಕಾಶ..

ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಭಾರತ ತಂಡದಲ್ಲಿ ಗಾಯಾಳು ಜಸ್ಪ್ರೀತ್ ಬುಮ್ರಾ ಬದಲಿಗೆ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿದೆ. ಅಭ್ಯಾಸದ ವೇಳೆ ಎಡಗೈ ಹೆಬ್ಬೆರಳಿನ ಗಾಯಕ್ಕೆ ಒಳಗಾಗಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ಸರಣಿಗೆ ಅಲಭ್ಯರಾಗಿದ್ದಾರೆ.

ಪ್ರಸಕ್ತ ನಡೆಯುತ್ತಿರುವ ಟಿ-20 ಸರಣಿಯಲ್ಲಿ, ಬುಮ್ರಾ ಬದಲು ಭಾರತ ತಂಡದಲ್ಲಿ ದೀಪಕ್ ಚಾಹರ್ ಗೆ ಅವಕಾಶ ಲಭಿಸಿದೆ. ಟಿ-20 ಸರಣಿ ಮುಕ್ತಾಯಗೊಂಡ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ. ಜುಲೈ 12ರಂದು ಟ್ರೆಂಟ್ ಬ್ರಿಡ್ಜ್ ನ ನಾಟಿಂಗ್ ಹ್ಯಾಮ್ ಅಂಗಳದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಏಕದಿನ ಸರಣಿಯ ನಂತರ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

 

Leave a Reply

Your email address will not be published.

Social Media Auto Publish Powered By : XYZScripts.com