ಹುಬ್ಬಳ್ಳಿ : ಖಾಸಗಿ ಬಸ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕರ ಗುಂಪು..

ಹುಬ್ಬಳ್ಳಿ : ಖಾಸಗಿ ಬಸ್ ಚಾಲಕನಿಗೆ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯ ಗ್ಲಾಸ್‌ ಹೌಸ್ ಬಳಿ ನಡೆದಿದೆ. ಪೊಲೀಸರ ಕಣ್ಣ ಮುಂದೆ ನಡೆದರೂ, ಪೋಲೀಸರು ಇದನ್ನೆಲ್ಲ ನೋಡಿಯೂ ನೋಡದಂತೆ ಇದ್ದರು.

ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಬೈಕ್ ಸವಾರನ ಕಾಲಿಗೆ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲೇ ಇದ್ದ ಯುವಕರ ಗುಂಪು ಚಾಲಕನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದೆ, ಹಲ್ಲೆ ಮಾಡಿದ ನಂತರ ಬಸನಲ್ಲಿದ್ದ ವಸ್ತುಗಳನ್ನ ಜಖಂ ಮಾಡಿದ್ದಾರೆ.

ಹಲ್ಲೆ ಮಾಡಿರುವುದನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಮದ್ಯರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತವಾದರೆ ಕಾನೂನು ರೀತಿ ಹೋರಾಟ ಮಾಡಬೇಕು. ಅದು ಬಿಟ್ಟು ಚಾಲಕನ ಮೇಲೆ ಹಲ್ಲೆ ಮಾಡಿದ್ದು ಯಾವ ನ್ಯಾಯ ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿ ನಡೆದ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com