Loksabha polls : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸುಳಿವು ನೀಡಿದ ವೀರಪ್ಪ ಮೊಯ್ಲಿ….

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಸಂಸದ ವೀರಪ್ಪ ಮೊಯ್ಲಿ ಸುಳಿವು ಬಿಚ್ಚಿಟ್ಟಿದ್ದಾರೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಾಗಿವೆ. ಇದರಿಂದ ಕಾಂಗ್ರೆಸ್ ಗೆ 18 ಕ್ಷೇತ್ರಗಳು ಸಿಗಲಿವೆ ಎಂದು ಸಂಸದ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಈ ಕುರಿತು ಮಾತನಾಡಿದ ವೀರಪ್ಪಮೊಯ್ಲಿ,ದೇಶದಲ್ಲಿ ಎಲ್ಲಿಯೂ ಪ್ರಧಾನಿ ಮೋದಿ ಅಲೆ ಇಲ್ಲ. ಹಣದ ಹೊಳೆಯನ್ನೇ ಮತ್ತೆ ಗೆಲ್ಲಲು ತಂತ್ರ ರೂಪಿಸಿದ್ದಾರೆ. ಆದರೆ ಬಿಜೆಪಿ ಸೋಲಿಸಲು ವಿಪಕ್ಷಗಳು ಸನ್ನದ್ಧವಾಗಿವೆ ಎಂದು ಹೇಳಿದರು.

ಪ್ರಧಾನಿ ಮೋದಿ ಆಡಳಿತದಿಂದ ದೇಶದ ಜನರು ಭ್ರಮನಿರಸನಗೊಂಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲಿದೆ ಎಂದು ಭವಿಷ್ಯ ನುಡಿದರು.

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ವೀರಪ್ಪ ಮೊಯ್ಲಿ, ಮೈತ್ರಿ ಸರ್ಕಾರದ ಬಜೆಟ್ ಸಮಗ್ರ ಕರ್ನಾಟಕದ ಬಜೆಟ್ ಆಗಿದೆ. ಕರಾವಳಿ, ಉತ್ತರಕರ್ನಾಟಕ, ಮಲೆನಾಡು ಭಾಗಗಳನ್ನ ಕಡೆಗಣಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

Leave a Reply

Your email address will not be published.

Social Media Auto Publish Powered By : XYZScripts.com