ನಿಗಮ ಮಂಡಳಿ ನೇಮಕಾತಿ: ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಿ — ರಾಹುಲ್ ಗಾಂಧಿ ..

ಕೊನೆಗೂ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಡಿಸಿಎಂ ಜಿ. ಪರಮೇಶ್ವರ್ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಮಾಡಲು ಸೂಚನೆ ನೀಡಿದ್ದಾರೆ.

ಇನ್ನೂ ನಿಗಮ ಮಂಡಳಿ ನೇಮಕಾತಿಯಲ್ಲಿ 20 ಶಾಸಕರಿಗೆ ಸ್ಥಾನ ಮೀಸಲಿರಿಸಬೇಕು. ಉಳಿದ 30 ಸ್ಥಾನಗಳನ್ನು ಕಾರ್ಯಕರ್ತರಿಗೆ ಮೀಸಲಿಡಲು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com