ನಿರ್ಭಯಾ ಪ್ರಕರಣ : ಅತ್ಯಾಚಾರಿಗಳಿಗೆ ವಿಧಿಸಿದ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್..

ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಮೂವರು ತಪ್ಪಿತಸ್ಥರು ಸಲ್ಲಿಸಿದ್ದ ತೀರ್ಪಿನ ಮರುಪರಿಶೀಲನೆ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಗಲ್ಲುಶಿಕ್ಷೆಯನ್ನು ವಿಧಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ಮೇ 5, 2017ರಂದು ಉನ್ನತ ನ್ಯಾಯಾಲಯವೂ ಕೂಡ ಗಲ್ಲುಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಆ ಬಳಿಕ ಮೂವರು ತಪ್ಪಿತಸ್ಥರಾದ ಮುಕೇಶ್, ಪವನ್ ಗುಪ್ತಾ ಹಾಗೂ ವಿನಯ್ ಶರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿ ತೀರ್ಪಿನ ಮರುಪರಿಶೀಲನೆಗೆ ಆಗ್ರಹಿಸಿ ಅರ್ಜಿ ಸಲ್ಲಿಸಿದ್ದರು. ಇನ್ನೋರ್ವ ತಪ್ಪಿತಸ್ಥ ಅಕ್ಷಯ ಕುಮಾರ್ ಸಿಂಗ್ ಅರ್ಜಿ ಸಲ್ಲಿಸಿರಲಿಲ್ಲ.

2012 ಡಿಸೆಂಬರ್ 16ರಂದು 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಸ್ನೇಹಿತನೊಂದಿಗೆ ತೆರಳುವಾಗ ಆಕೆಯ ಮೇಲೆ ಬಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು.

Leave a Reply

Your email address will not be published.

Social Media Auto Publish Powered By : XYZScripts.com