ಕೋಲಾರ : ಕಲಬೆರಕೆ ಪೆಟ್ರೋಲ್ ಮಾರಾಟ ಆರೋಪ : ಬಂಕ್ ವಿರುದ್ಧ ಸಾರ್ವಜನಿಕರ ಆಕ್ರೋಶ

ಕೋಲಾರ ; ಕಲಬೆರಕೆ ಪೆಟ್ರೋಲ್ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೆಟ್ರೋಲ್ ಬಂಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗುಟ್ಟಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರ ಯಾಶಿಶ್ ಸರ್ವೀಸ್ ಸ್ಟೇಷನ್ ನಲ್ಲಿ ನಡೆದಿದೆ.

ಪ್ರಶ್ನೆ ಮಾಡಿದವರನ್ನು ಬಂಕ್ ಮಾಲೀಕ ಪೊಲೀಸರ ಮೂಲಕ ದಮ್ಕಿ ಹಾಕಿಸಿ ಠಾಣೆಗೆ ಕಳುಹಿಸಿದ್ದಾನೆ. ಪೆಟ್ರೋಲ್ ನಲ್ಲಿ ಸೀಮೆಎಣ್ಣೆ ಮಿಕ್ಸ್ ಮಾಡಿ ಮಾರಾಟ ಮಾಡುವ ಮೂಲಕ ಮೈಲೆಜ್ ಸಿಗುತ್ತಿಲ್ಲವೆಂದು ಗ್ರಾಹಕರು ಆರೋಪಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published.

Social Media Auto Publish Powered By : XYZScripts.com