ಬಳ್ಳಾರಿ : ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ : ಅಪಹರಿಸಿ ಕೊಲೆಗೆ ಯತ್ನ..

ಬಳ್ಳಾರಿ : ಬಳ್ಳಾರಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಹಲ್ಲೆಗೊಳಗಾದ ಅಭಿಷೇಕ್ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಅಪಹರಣ ಮತ್ತು ಕೊಲೆಗೆ ಯತ್ನಿಸಲಾಗಿದೆ ಎಂಬ ಶಂಕೆ ಪೋಲೀಸರಿಂದ ವ್ಯಕ್ತವಾಗಿದೆ. ಅಭಿಷೇಕ್ ಎಂಬುವರನ್ನು ಕೊಲೆ ಹಾಗೂ ಅಪಹರಣ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ.

ಘಟನೆಯ ಕುರಿತು ಹಲ್ಲೆಗೊಳಗಾದ ಅಭಿಷೇಕ್ ಕೌಲ್ ಬಜಾರ್ ಪೊಲೀಸ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.