Council speaker cont : ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ, ಸಿದ್ದರಾಮಯ್ಯ ಬಳಿ ದೂರು…

ಬೆಂಗಳೂರು: ವಿಧಾನಪರಿಷತ್ ನ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಎದ್ದಿದ್ದು, ಸಿದ್ದರಾಮಯ್ಯ ಬಳಿ ಶಾಸಕರು ಅತೃಪ್ತಿ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತವಿದೆ. ಹೀಗಿದ್ದಾಗ ಜೆಡಿಎಸ್ ಗೆ ಸ್ಪೀಕರ್ ಸ್ಥಾನ ಬಿಟ್ಟುಕೊಡುವುದರ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನವಿದೆ. ಸ್ವತಃ ಡಿಸಿಎಂ ಪರಮೇಶ್ವರ್ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಡಲು ಮನಸ್ಸು ಮಾಡಿರುವುದು ಕಾಂಗ್ರೆಸ್ ಶಾಸಕರ ಅಸಮಾಧಾನ ಹೆಚ್ಚಿಸಿದೆ.


ಸ್ಪೀಕರ್ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಟ್ಟು, ಮುಖ್ಯ ಸಚೇತಕ ಸ್ಥಾನವನ್ನು ತಮ್ಮ ಆಪ್ತ ರಘು ಚೇತನ್ ಗೆ ವಹಿಸಲು ಪರಮೇಶ್ವರ್ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಇದೇ ಕಾರಣಕ್ಕೆ ಸ್ಪೀಕರ್ ಆಯ್ಕೆಯೂ ತಡವಾಗುತ್ತಿದೆ.

Leave a Reply

Your email address will not be published.

Social Media Auto Publish Powered By : XYZScripts.com