ವಿಜಯಪುರ : ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ

ವಿಜಯಪುರ : ಎರಡು ಲಾರಿಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಎರಡು ಗಂಟೆಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ವಿಜಯಪುರ ನಗರದ ಹೊರ ವಲಯದ ಸೋಲಾಪುರ ರಸ್ತೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 13ರಲ್ಲಿ ನಡೆದ ಘಟನೆ ನಡೆದಿದ್ದು, ಕಿರಿದಾದ ಸೇತುವೆಯಲ್ಲಿ ಲಾರಿಗಳು ಸಿಲುಕಿವೆ.

ಲಾರಿಯಲ್ಲಿ ಓರ್ವ ಚಾಲಕ ಸಿಲುಕಿಕೊಂಡಿದ್ದು, ಮತ್ತೊಬ್ಬ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ರಸ್ತೆಯಲ್ಲಿ ಸಂಚಾರ ಸುಗಮಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com