ಕರಾವಳಿಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಚಿಂತನೆ : ವಿನಯ್ ಕುಮಾರ್ ಸೊರಕೆಗೆ KPCC ಕಾರ್ಯಾಧ್ಯಕ್ಷ ಹುದ್ದೆ..?

ಮಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ.

ಕರಾವಳಿ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅಲ್ಲಿನ ನಾಯಕರಿಗೆ ಪ್ರಮುಖ ಹುದ್ದೆ ನೀಡಿ ಆ ಭಾಗಕ್ಕೆ ಹೆಚ್ಚು ಒತ್ತು ಕೊಡಲು ನಿರ್ಧರಿಸಿದ್ದಾರೆ. ಕೆಪಿಸಿಸಿಯಲ್ಲಿ ಪ್ರಮುಖ ಹುದ್ದೆಗೆ ಕಾಪು ಮೂಲದ ವಿನಯ್ ಕುಮಾರ್ ಸೊರಕೆಯವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.

ಈ ಮೂಲಕ ಕರಾವಳಿಯಲ್ಲಿ ಮತ್ತೆ ಕೈ ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ. ಕೆಪಿಸಿಸಿಯಲ್ಲಿ ಕಾರ್ಯಾಧ್ಯಕ್ಷ ಹುದ್ದೆ ಆಯ್ಕೆ ನಡೆಯಬೇಕಿದ್ದು, ಈ ಸ್ಥಾನಕ್ಕೆ ಸತೀಶ್ ಜಾರಕಿ ಹೊಳಿ ಕೂಡಾ ಪ್ರಮುಖ ಆಕಾಂಕ್ಷಿ ಎನ್ನಲಾಗಿದೆ. ಆದರೆ ಕರಾವಳಿಯಲ್ಲಿ ಕಾಂಗ್ರೆಸ್ ಬಲವರ್ಧನೆಗೆ ವಿನಯ್ ಕುಮಾರ್ ಸೊರಕೆಗೆ ಈ ಜವಾಬ್ಧಾರಿ ನೀಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com