Cricket : ಕುಲದೀಪ್‍ಗೆ 6 ವಿಕೆಟ್ : ರೋಹಿತ್ ಅಜೇಯ ಶತಕ : ಭಾರತಕ್ಕೆ ಗೆಲುವಿನ ಶುಭಾರಂಭ

ನಾಟಿಂಗ್ ಹ್ಯಾಮ್ ನಲ್ಲಿರುವ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಗುರುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಭಾರತ ವಿಕೆಟ್ ಗಳಿಂದ ಜಯಗಳಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ 49.5 ಓವರುಗಳಲ್ಲಿ 268 ಆಲೌಟ್ ಆಯಿತು. ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಸ್ಪಿನ್ನರ್ ಕುಲದೀಪ್ ಯಾದವ್ 6 ವಿಕೆಟ್ ಕಬಳಿಸಿದರು.

ಗುರಿಯನ್ನು ಬೆನ್ನಟ್ಟಿದ ಭಾರತ 40.1 ಓವರುಗಳಲ್ಲಿ 269 ರನ್ ಸೇರಿಸಿ ಗೆಲುವಿನ ದಡ ಸೇರಿತು. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ರೋಹಿತ್ ಶರ್ಮಾ 18ನೇ ಏಕದಿನ ಶತಕ ಗಳಿಸಿದರು. 114 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 15 ಬೌಂಡರಿ ಹಾಗೂ 4 ಸಿಕ್ಸರ್ ಗಳನ್ನು ಸಿಡಿಸಿ 137 ಗಳಿಸಿದರು. ನಾಯಕ ವಿರಾಟ್ ಕೊಹ್ಲಿ 75, ಶಿಖರ್ ಧವನ್ 40 ರನ್ ಗಳಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com