ಚಟಕ್ಕಾಗಿ ಪತ್ರ ಬರೆಯುವ ಸಿದ್ದರಾಮಯ್ಯ ಉತ್ತರ ಕುಮಾರನಂಗೆ – ಕೆ.ಎಸ್ ಈಶ್ವರಪ್ಪ…

ರಾಜಕೀಯ ಚಟಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯುವ ನಾಟಕ ಬೇಡ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.


ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರು ಸರ್ಕಾರಕ್ಕೆ ಪತ್ರ ಬರೆಯುವ ರಾಜಕೀಯ ನಾಟಕವಾಡುತ್ತಿರುವುದನ್ನು ಮೊದಲು ನಿಲ್ಲಿಸಲಿ. ನೇರ ಸಾಲಮನ್ನಾ ಕಡಿತಗೊಳಿಸಿರುವ ಅನ್ನಭಾಗ್ಯದ ಎರಡು ಕೆಜಿ ಅಕ್ಕಿಯನ್ನು ಜನರಿಗೆ ಒದಗಿಸಲು ಸರ್ಕಾರದ ಮೇಲೆ ಒತ್ತಡ ಹೇರಲಿ. ವಿದ್ಯುತ್ ದರ, ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ದರ ಇಳಿಸುವಂತೆ ಸರ್ಕಾರಕ್ಕೆ ತಿಳಿಸಲಿ ಅದನ್ನು ಬಿಟ್ಟು ಪತ್ರ ಬರೆಯುವ ನಾಟಕವಾಡಬಾರದು. ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರನಂತಾಗುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ರೈತರ ಸಂಪೂರ್ಣ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ರೈತರ ನಿರೀಕ್ಷೆ ಹುಸಿಯಾಗಿಸಿದೆ. ರೈತರ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಪರದಾಡುತ್ತಿದೆ. ಪ್ರಸ್ತುತ ಈಗ ಸಾಲ ಮನ್ನಾ ಮಾಡಿರುವುದಕ್ಕೆ ಜನಸಾಮಾನ್ಯರ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಸಾಲ ಮನ್ನಾದ ಹಣ ಹೊಂದಿಸಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿ, ಸಾರಿಗೆ ಸಚಿವರು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published.