20 ಐಎಎಸ್ ಅಧಿಕಾರಿಗಳ ವರ್ಗಾವಣೆ : ಮೈತ್ರಿ ಸರ್ಕಾರದ ಸಚಿವರಿಂದಲೇ ಅಸಮಾಧಾನ…

ಅಧಿವೇಶನ ಮುಗಿದ ಬೆನ್ನಲ್ಲೇ ನಿನ್ನೆಯಷ್ಟೆ ಸಿಎಂ ಹೆಚ್.ಡಿ ಕುಮಾರಸ್ವಾಮಿ 20 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದಾರೆ. ಇದಕ್ಕೆ ಮೈತ್ರಿ ಸರ್ಕಾರದ ಸಚಿವರಿಂದಲೇ ಅಸಮಾಧಾನ ವ್ಯಕ್ತವಾಗಿದೆ.


ಈ ಬಗ್ಗೆ ಸಚಿವ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದು, ಯಾವುದೇ ಸಚಿವರ ಗಮನಕ್ಕೆ ತಾರದೇ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದಿದ್ದಾರೆ. ಡಿಸಿಎಂ ಡಾ. ಜಿ. ಪರಮೇಶ್ವರ್ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಳಿ ಸಚಿವ ಯು.ಟಿ‌. ಖಾದರ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಜತೆ ಮಾತುಕತೆ ನಡೆಸುವ ಬಗ್ಗೆ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಭರವಸೆ ನೀಡಿದ್ದಾರೆ.


ಈ ಹಿಂದೆ ಕಪಿಲ್ ಮೋಹನ್ ಅವರನ್ನು ನನ್ನ ಗಮನಕ್ಕೆ ತಾರದೇ ವರ್ಗಾವಣೆ ಮಾಡಿದ್ದರು. ಈಗ ನನ್ನ ಗಮನಕ್ಕೆ ತಿಳಿಸದೇ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ಹೀಗೆ ವರ್ಗಾವಣೆ ಮುಂದುವರಿದರೆ ಆಡಳಿತದ ಮೇಲಿನ ಹಿಡಿತ ಕೈತಪ್ಪುತ್ತದೆ. ಇಲಾಖೆಯ ಸಾಧನೆಗೆ ಸಚಿವರೇ ಉತ್ತರದಾಯಿಗಳಾಗಿದ್ದು, ಹೀಗಿರುವಾಗ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಕನಿಷ್ಠ ಚರ್ಚೆ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published.