ಕನ್ನಡ ಹೋರಾಟಗಾರರ ಪರ ಇಂಗ್ಲೀಷ್ ನಲ್ಲಿ ಪತ್ರ – ಇಕ್ಕಟ್ಟಿನಲ್ಲಿ ಸಿದ್ದರಾಮಯ್ಯ..

ಕನ್ನಡಪರ ಹೋರಾಟಗಾರರು ಮತ್ತು ಸಾಹಿತಿಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿದನ್ನ ಖಂಡಿಸಿ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಷಾ ಅವರಿಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯವರು ಇಂಗ್ಲಿಷ್ ನಲ್ಲಿ ಪತ್ರ ಬರೆದು ಇಕ್ಕಟ್ಟಿಗೆ ಸಿಲುಕಿದ ಪ್ರಸಂಗ ನಡೆದಿದೆ..


ಕನ್ನಡ ಪರ ಹೋರಾಟಗಾರರ ಬಗ್ಗೆ ಲಘುವಾಗಿ ಟ್ವಿಟ್ಟರ್ ನಲ್ಲಿ ಟೀಕಿಸಿದ್ದ ಕಿರಣ್ ಮಜುಂದಾರ್ ಷಾ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ ಸಿದ್ದರಾಮಯ್ಯವರು ಇಂಗ್ಲಿಷ್ ನಲ್ಲಿ ಪತ್ರ ಬರೆದಿದ್ದರು. ಎಸ್.ಜಿ ಸಿದ್ದರಾಮಯ್ಯ ಅವರು ಬರೆದ ಇಂಗ್ಲೀಷ್ ಪತ್ರಕ್ಕೆ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಕನ್ನಡದಲ್ಲಿ ಪತ್ರ ಬರೆದಿದ್ದಾರೆ.

ನಮ್ಮ ಕನ್ನಡ ನಾಡು ನುಡಿ ಭಾಷೆ ನೆಲ ಜಲದ ಬಗ್ಗೆ ನನಗೆ ಅಪಾರ ಗೌರವವಿದೆ. ಎಂದೂ ನಾನು ಕನ್ನಡಕ್ಕೆ ಅವಮಾನ ಮಾಡುವ ರೀತಿ ಟ್ವಿಟ್ ಮಾಡಿಲ್ಲ. ಟ್ವಟ್ಟರ್ ನಲ್ಲಿ ನಾನು ಮಾಡಿದ್ದ ಟ್ವಿಟ್ ಅನ್ನ ತಪ್ಪಾಗಿ ಅರ್ಥೈಸಲಾಗಿದೆ ಎಂದು ಕನ್ನಡದಲ್ಲೇ ಪತ್ರ ಬರೆದು ಕಿರಣ್ ಮಜುಂದಾರ್ ಷಾ ಅವರು ಕ್ಷಮೆ ಕೋರಿದ್ದಾರೆ.

ಒಟ್ಟಿನಲ್ಲಿ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಇಂಗ್ಲೀಷ್ ನಲ್ಲಿ ಪತ್ರ ಬರೆದು ಎಸ್.ಜಿ ಸಿದ್ದರಾಮಯ್ಯವ ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ-ಪ್ರವಚನ ನಡೆಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಅದರ ಅಧ್ಯಕ್ಷರು, ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ಕಿಡಿಗೇಡಿಗಳು ಎಂದು ಟೀಕೆ ಮಾಡಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com