ಮಂಡ್ಯ : ರೇಷ್ಮೆ ಬೆಳೆಗಾರರ ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ರೈತರು..!

ರೇಷ್ಮೆ ಬೆಳೆಗೆ 500 ರೂಪಾಯಿ ಬೆಂಬಲ ಬೆಲೆ ಹಾಗೂ ವಿದೇಶಿ ಆಮದು ನಿಷೇಧ ಮಾಡುವಂತೆ ಆಗ್ರಹಿಸಿ ರೇಷ್ಮೆ ಬೆಳೆಗಾರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ
ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದ ಬೆಳೆಗಾರರು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಂಚೇಗೌಡ ಹಾಗೂ ಮತ್ತೊಬ್ಬ ಬೆಳೆಗಾರ ವಿಷ ಸೇವನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲೇ ಇದ್ದ ಇತರೆ ಬೆಳೆಗಾರರು ಹಾಗೂ ಪೊಲೀಸರು ಇಬ್ಬರನ್ನೂ ತಮ್ಮ ವಾಹನದಲ್ಲೇ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಮತ್ತೊಂದು ಕಡೆ ರೈತರು ಹೋರಾಟ ಆರಂಭ ಮಾಡಿದ್ದು, ಬೆಂಬಲ ಬೆಲೆಗೆ ಪಟ್ಟು ಹಿಡಿದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com