ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕನ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ಉಪಮುಖ್ಯಮಂತ್ರಿ

ಬೆಂಗಳೂರು : ವೇತನ ವಿಳಂಬದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಪೌರ ಕಾರ್ಮಿಕ ಸುಬ್ರಮಣಿ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಿ, ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಪರಮೇಶ್ವರ್  ಗಾಂಧಿನಗರ ಮುನೇಶ್ವರ ಬ್ಲಾಕ್’ನಲ್ಲಿರುವ ಸುಬ್ರಮಣಿ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮಹತ್ಯೆಗೆ ಪರಿಹಾರವಾಗಿ ಘೋಷಿಸಲಾಗಿದ್ದ ರೂ.10 ಲಕ್ಷಗಳಲ್ಲಿ ಬಾಕಿಯಿದ್ದ ರೂ.5 ಲಕ್ಷ ಪರಿಹಾರದ ಚೆಕ್’ನ್ನು ಕುಟುಂಬಕ್ಕೆ ವಿತರಿಸಿ, ಸಾಂತ್ವನ ಹೇಳಿದ್ದರು.
Image result for g parameshwara meeting
ಸುಬ್ರಮಣಿ ಅವರ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಲಾಗುವುದು. ಜೊತೆಗೆ ಅವರ ಮಕ್ಕಳಾದ 10 ವರ್ಷದ ಪವಿತ್ರಾ ಮತ್ತು 7 ವರ್ಷದ ದರ್ಶನ್ ಅವರ ವಿದ್ಯಾಭ್ಯಾಸದ ಹೊಣೆಯನ್ನೂ ಬಿಬಿಎಂಪಿಯೇ ಹೊರಲಿದೆ ಎಂದು ಹೇಳಿದ್ದಾರೆ. ಜೊತೆಗೆ ಸುಬ್ರಮಣಿಯವರ ಕುಟುಂಬಕ್ಕೆ ವಾಸಿಸಲು ಮನೆ ನಿರ್ಮಾಣ ಮಾಡಿಕೊಡುವುದಾಗಿಯೂ ಭರವಸೆ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ , ಸುಬ್ರಮಣಿ ಆತ್ಮಹತ್ಯೆಗೆ ಶರಣಾಗಿರುವುದು ವಿಷಾದದ ಸಂಗತಿ. ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದ ಸುಬ್ರಮಣಿಯವರಿಗೆ ಗುತ್ತಿಗೆದಾರರು 6 ತಿಂಗಳಿನಿಂದ ವೇತನ ಬಾಕಿ ಇಟ್ಟಿದ್ದರು ಎಂಬುದು ಬೆಳಕಿಗೆ ಬಂದಿದೆ. ಗುತ್ತಿಗೆ ಪದ್ಧತಿ ಮುಗಿದ ಬಳಿಕ ಅವರನ್ನು ಗುತ್ತಿಗೆದಾರರು ನಿಯಮಬಾಹಿರವಾಗಿ ಪೌರ ಕಾರ್ಮಿಕ ಕೆಲಸಕ್ಕೆ ಸೇರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com