Cricket : ಭಾರತ- ಇಂಗ್ಲೆಂಡ್ 3ನೇ ಏಕದಿನ : ನಿರ್ಣಾಯಕ ಪಂದ್ಯದಲ್ಲಿ ಸರಣಿ ಜಯಕ್ಕಾಗಿ ಕಾದಾಟ

ಹೆಡಿಂಗ್ಲೆಯ ಲೀಡ್ಸ್ ಅಂಗಳದಲ್ಲಿ ಮಂಗಳವಾರ ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳ ನಡುವೆ 3ನೇ ಏಕದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಿವೆ. ಮಂಗಳವಾರ ನಡೆಯಲಿರುವ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ತಮ್ಮದಾಗಿಸಿಕೊಳ್ಳುವ ತವಕದಲ್ಲಿವೆ.

ಕಳೆದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಕೆ.ಎಲ್ ರಾಹುಲ್ ಬ್ಯಾಟಿಂಗ್ ಲಯ ಕಂಡುಕೊಳ್ಳುವ ಅಗತ್ಯವಿದೆ. ಸ್ಪಿನ್ ಜೋಡಿಗಳಾದ ಚಹಲ್ ಹಾಗೂ ಕುಲದೀಪ್ ಇಂಗ್ಲೆಂಡ್ ಬ್ಯಾಟ್ಸಮನ್ ಗಳನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಬೇಕಿದೆ. ನೆಟ್ಸ್ ನಲ್ಲಿ ಅಭ್ಯಾಸ ನಡೆಸಿರುವ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಮೂರನೇ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ.

ಮೊದಲ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಇಂಗ್ಲೆಂಡ್ ಎರಡನೇ ಪಂದ್ವನ್ನು ಗೆದ್ದು ಭಾರತಕ್ಕೆ ತಿರುಗೇಟು ನೀಡಿತ್ತು. ಇದೀಗ ಸರಣಿ ಜಯದ ಮಾಲೆ ಯಾರ ಕೊರಳಿಗೆ ಒಲಿಯಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದಿತ್ತು. ಲಾರ್ಡ್ಸ್ ನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 86 ರನ್ ಭರ್ಜರಿ ಜಯ ದಾಖಲಿಸಿತ್ತು.

 

Leave a Reply

Your email address will not be published.

Social Media Auto Publish Powered By : XYZScripts.com