ಗದಗ : ಹೆಚ್ಚಿನ ಬಸ್ ಸೌಕರ್ಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ಹೆಚ್ಚಿನ ಬಸ್ ಸೌಕರ್ಯಕ್ಕಾಗಿ ಆಗ್ರಹಿಸಿ ಬಸ್ ತಡೆದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ಮಾಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಕೇವಲ ಒಂದೆ ಒಂದು ಬಸ್ ಸಂಚರಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಆದ್ದರಿಂದ ಹೆಚ್ಚಿನ ನಾಲ್ಕು ಬಸ್ ಬಿಡಲು ಒತ್ತಾಯಿಸಿ ಪ್ರತಿಭಟನೆ ಮಾಡಿದರು. ಜಕ್ಕಲಿ ಗ್ರಾಮದ ಮೂಲಕ ರೋಣ ಹಾಗೂ ಗದಗ ಮಾರ್ಗವಾಗಿ ಬಸ್ ಬಿಡಲು ಆಗ್ರಹಿಸಿ ಬಸ್ ತಡೆದು ಮೇಲೆ ಹತ್ತಿ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಲ್ಲಿ ವಿದ್ಯಾರ್ಥಿಗಳು ಹಾಗೂ ಸ್ಥಳಿಯರು ಭಾಗವಹಿಸಿದ್ದರು. ಗದಗ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟುಹಿಡಿದು ಒಂದು ಗಂಟೆಗಳ ಕಾಲ ಬಸ್ ತಡೆದು ಪ್ರತಿಭಟನೆ ಮಾಡಿದರು.

Leave a Reply

Your email address will not be published.

Social Media Auto Publish Powered By : XYZScripts.com