Cricket : ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ : ರಿಷಭ್ ಪಂತ್, ಕುಲದೀಪ್‍ಗೆ ಸ್ಥಾನ : ತಂಡಕ್ಕೆ ಮರಳಿದ ಶಮಿ

ಮುಂಬರುವ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗಾಗಿ 18 ಸದಸ್ಯರ ಟೀಮ್ ಇಂಡಿಯಾವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಎಡಗೈ ಸ್ಫೋಟಕ ಬ್ಯಾಟ್ಸಮನ್ ರಿಷಭ್ ಪಂತ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.

ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲರಾಗಿ ಅಫಘಾನಿಸ್ತಾನ ವಿರುದ್ಧ ಟೆಸ್ಟ್ ಪಂದ್ಯ ಆಡದೇ ಇದ್ದ, ವೇಗದ ಬೌಲರ್ ಮೊಹಮ್ಮದ್ ಶಮಿ ತಂಡಕ್ಕೆ ಮರಳಿದ್ದಾರೆ. ಹೆಬ್ಬೆರಳಿನ ಗಾಯದಿಂದ ಬಳಲುತ್ತಿರುವ ವೃದ್ಧಿಮಾನ್ ಸಹಾ ಬದಲು ವಿಕೆಟ್ ಕೀಪರ್ ರೂಪದಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ನೀಡಲಾಗಿದೆ. ಟೆಸ್ಟ್ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದ್ದು, ಆಗಸ್ಟ್ 1 ರಂದು ಮೊದಲ ಟೆಸ್ಟ್ ಪ್ರಾರಂಭವಾಗಲಿದೆ.

ತಂಡ ಇಂತಿದೆ : ವಿರಾಟ್ ಕೊಹ್ಲಿ, ಶಿಖರ್ ಧವನ್, ಕೆ.ಎಲ್ ರಾಹುಲ್, ಎಮ್. ವಿಜಯ್, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ, ಕರುಣ್ ನಾಯರ್, ದಿನೇಶ್ ಕಾರ್ತಿಕ್,  ರಿಷಭ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್.

Leave a Reply

Your email address will not be published.

Social Media Auto Publish Powered By : XYZScripts.com