ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶೀರೂರು ಶ್ರೀಗಳು ನಿಧನ…!

ತೀವ್ರ ಅಸ್ವಸ್ಥರಾಗಿದ್ದ ಶ್ರೀಗಳನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.  ನಿನ್ನೆ ಫುಡ್ ಪಾಯಿಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಸಲಾಗಿತ್ತು. ಅವರನ್ನು ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. 

  ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶೀರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.

Image result for shiroor swamiji

ನಿನ್ನೆ ಬೆಳಿಗ್ಗೆ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿತ್ತು. ವಿಪರೀತ ರಕ್ತ ವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com