ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಣೆ..

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವರಾದ ಎಚ್.ಡಿ.ರೇವಣ್ಣ, ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವರಾದ ಸಾ.ರಾ.ಮಹೇಶ್, ಶಾಸಕರಾದ ಕೆ.ಜಿ.ಬೋಪಯ್ಯ ಹಾಜರಿದ್ದರು.

ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಶಾಸಕರಾದ ಡಾ.ಎ.ಟಿ.ರಾಮಸ್ವಾಮಿ, ಕೆ.ಮಹದೇವ, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಜಿ.ಪಂ.ಸದಸ್ಯರಾದ ಕೆ.ಆರ್.ಮಂಜುಳ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷರಾದ ಪುಷ್ಪಾ ರಾಜೇಶ್, ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಲಕ್ಷ್ಮೀ ರವಿ, ಉಪಾಧ್ಯಕ್ಷರಾದ ಕೆ.ವಿ.ಸಣ್ಣಪ್ಪ ಇತರರು ಇದ್ದರು.

Leave a Reply

Your email address will not be published.

Social Media Auto Publish Powered By : XYZScripts.com